ಸುಬ್ರಹ್ಮಣ್ಯ:ಮೇ.30. ಸರಕಾರಿ ಸೇವೆ ಯಿಂದ ನಿವೃತ್ತಿ ಹೊಂದಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ಅವರಿಗೆ ಗೌರವಾರ್ಪಣೆ ಕಾರ್ಯಕ್ರಮ ಸುಬ್ರಹ್ಮಣ್ಯದ ವಲ್ಲೀಶ ಸಭಾಂಗಣದಲ್ಲಿ ಇಂದು ನಡೆಯಿತು.
ಅನೇಕ ಸಂಸ್ಥೆಗಳು, ನೂರಾರು ಅಭಿಮಾನಿಗಳು ಸನ್ಮಾನಿಸಿ ಶುಭ ಹಾರೈಸಿದರು.
ಸಭಾಂಗಣದಲ್ಲಿ ಕಿಕ್ಕಿರಿದು ತುಂಬಿದ್ದ ಜನಸ್ತೋಮದ ನಡುವೆ ಡಾ.ನಿಂಗಯ್ಯ ಅವರಿಗೆ ಸಾರ್ವಜನಿಕ ಸನ್ಮಾನ ನೆರವೇರಿತು.
ಹುಟ್ಟೂರಿನಿಂದ ಬೃಹತ್ ಹಾರ:
ಸನ್ಮಾನ ಸಮಾರಂಭಕ್ಕೆ ಅವರ ಹುಟ್ಟೂರಿನಿಂದ ನೂರಾರು ಅಭಿಮಾನಿಗಳು ಆಗಮಿಸಿದ್ದರು.ಅಲ್ಲದೆ ಬೃಹತ್ ಹಾರ ಹಾಕಿ ಡಾ.ನಿಂಗಯ್ಯ ಅವರನ್ನು ಸನ್ಮಾನಿಸಿ ಸಂತಸಪಟ್ಟರು.

ಮೂರುವರೆ ವರ್ಷಗಳಿಂದ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು ಮೇ 31ರಂದು ಸರಕಾರಿ ಸೇವೆ ಯಿಂದ ನಿವೃತ್ತಿ ಹೊಂದಲಿದ್ದಾರೆ.
ಸುಬ್ರಹ್ಮಣ್ಯದ ವಿವಿಧ ಸಂಘ ಸಂಸ್ಥೆಗಳ ವತಿಯಿಂದ, ಸಾರ್ವಜನಿಕರ ವತಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು.
ಡಾ.ನಿಂಗಯ್ಯ. ಅವರ ಪತ್ನಿ ನಾಗರತ್ನ,ಅವರ ಪುತ್ತಿಯರಾದ ನವ್ಯಶ್ರೀ, ನಿಧಿಶ್ರೀ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ,ಎಇಓ ಯೇಸುರಾಜ್ ,ಕೆಎಸ್ಎಸ್ ಕಾಲೇಜು ಪ್ರಾಂಶುಪಾಲ ಡಾ.ದಿನೇಶ್ ಪಿ.ಟಿ., ಎಸ್ಎಸ್ ಎಸ್ ಪಿ ಯು ಕಾಲೇಜಿನ ಪ್ರಾಂಶುಪಾಲ ಸೋಮಶೇಖರ್ ನಾಯಕ್, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಯಶವಂತವ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಹಲವಾರು ಗಣ್ಯರು, ಅತಿಥಿಗಳು ಗೌರವಿಸಿ ಅಭಿನಂದಿಸಿದರು.
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ,ಮಾಜಿ ಸಚಿವ ಎಸ್.ಅಂಗಾರ, ಪ್ರಮುಖರಾದ ನಿತ್ಯಾನಂದ ಮುಂಡೋಡಿ, ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಡಾ.ನಿಂಗಯ್ಯ ಸ್ವಾಗತಿಸಿದರು. ಉಪನ್ಯಾಸಕ ರತ್ನಾಕರ ಸುಬ್ರಹ್ಮಣ್ಯ ಕಾರ್ಯಕ್ರಮ ನಿರೂಪಿಸಿದರು. ನಿವೃತ್ತ ಉಪನ್ಯಾಸಕ ವಿಶ್ವನಾಥ ನಡುತೋಟ ವಂದಿಸಿದರು.
0 ಕಾಮೆಂಟ್‌ಗಳು