ಶಿಬಾಜೆ-ಸ್ಟೇ ವಯರ್ ಗೆ ವಿದ್ಯುತ್ ಸ್ಪರ್ಶಿಸಿ -ಯುವತಿ ಸಾವು

ಕೊಕ್ಕಡ: ಜೂ,27.ಸ್ಟೇ ವಯರ್ ಗೆ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ಎಂಬಲ್ಲಿ ಇಂದು ಸಂಜೆ ನಡೆದಿದೆ.

Inshot 20240627 194645214

ಗಣೇಶ್ ಶೆಟ್ಟಿ ಮತ್ತು ರೋಹಿಣಿ ದಂಪತಿ ಪುತ್ರಿ ಪ್ರತೀಕ್ಷಾ ಶೆಟ್ಟಿ(20) ಮೃತ ದುರ್ದೈವಿ.

ಮನೆಯ ರಸ್ತೆಗೆ ಪಾರ್ಸೆಲ್ ಬಂದಿದ್ದರಿಂದ ಅದನ್ನು ಪಡೆಯಲು ರಸ್ತೆಗೆ ಬಂದಾಗ ನೀರಿನಲ್ಲಿ ನೀರಿನಲ್ಲಿದ್ದ ಸ್ಟೇ ವಯರ್ ಸ್ಪರ್ಶಿಸಿ ಯುವತಿ ಸಾವನ್ನಪ್ಪಿದ್ದಾರೆ. ಮೃತಪಟ್ಟ ಯುವತಿ ಕೊಕ್ಕಡ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದಳು.

ಯುವತಿಯ ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಆಸ್ಪತ್ರೆಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಭೇಟಿ ನೀಡಿದ್ದಾರೆ. ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದಾರೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೃತ ಯುವತಿ ತಂದೆ, ತಾಯಿ, ತಂದೆ ಹಾಗೂ ತಂಗಿಯನ್ನು ಅಗಲಿದ್ದಾರೆ.

0 ಕಾಮೆಂಟ್‌ಗಳು