ಕಡಬ: ಸೆ,26, ಕಡಬ ತಾಲೂಕು ಕಚೇರಿ ಮುಂಭಾಗದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳಿಂದ (VAO)ಅನಿರ್ದಿಷ್ಟಾವಧಿ ಮುಷ್ಕರ ಗುರುವಾರ ಬೆಳಿಗ್ಗೆಯಿಂದ ಆರಂಭಗೊಂಡಿದೆ.
ಕಚೇರಿಗಳಲ್ಲಿ ಕಾರ್ಯನಿರ್ವಹಿಸಲು ಹಲವಾರು ಮೂಲಭೂತ ಸಮಸ್ಯೆಗಳಿದ್ದು, ಮುಖ್ಯವಾಗಿ ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಶನ್‌ಗಳ ಮೂಲಕ ಆಗುತ್ತಿರುವ ಸಮಸ್ಯೆ, ಇಲಾಖೆಯಿಂದ ಅಭಿವೃದ್ದಿ ಪಡಿಸಿರುವ ಸುಮಾರು 21 ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು, ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯವಾಗಿರುವ ಮೊಬೈಲ್ ಸಾಧನ, ಹಾಗು ಲ್ಯಾಪ್‌ಟಾಪ್ ಹಾಗು ಅದಕ್ಕೆ ಅವಶ್ಯಕವಾಗಿರುವ ಇಂಟರ್‌ನೆಟ್ ಹಾಗು ಸ್ಕ್ಯಾನರ್ ಗಳನ್ನು ಒದಗಿಸದೆ ಕರ್ತವ್ಯ ನಿರ್ವಹಿಸಲು ಒತ್ತಡ ಉಂಟಾಗುತ್ತಿದೆ. ಅದ್ದರಿಂದ ನಮಗೆ ವೃತ್ತಕ್ಕೆ ಒಂದರಂತೆ ಮೊಬೈಲ್ ,ಲ್ಯಾಪ್‌ಟಾಪ್, ಗೂಗಲ್ ಕ್ರೋಮ್ ಬುಕ್ಕ್ , ಪ್ರಿಂಟರ್ , ಇಂಟರ್‌ನೆಟ್ ಸೌಲಭ್ಯ ಸೇರಿದಂತೆ ಇನ್ನೂ ಹಲವಾರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅನಿರ್ದಿಷ್ಟಾವಧಿ ಶಾಂತಿಯುತ ಮುಷ್ಕರ ಹಮ್ಮಿಕೊಳ್ಳಲಾಗಿದೆ.

ಸ್ಥಳಕ್ಕೆ ಆಗಮಿಸಿದ ಕಡಬ ತಾಲೂಕು ತಹಶೀಲ್ದಾರ್ ಪ್ರಭಾಕರ ಖಜೂರೆ ಅವರಿಗೆ ಬೇಡಿಕೆಗಳ ಮನವಿಯನ್ನು ಮುಷ್ಕರ ನಿರತರು ನೀಡಿದರು. ಗ್ರಾಮ ಆಡಳಿತ ಸಂಘದ ಅಧ್ಯಕ್ಷ ಶೇಷಾದ್ರಿ, ಉಪಾಧ್ಯಕ್ಷೆ ಶ್ರುತಿ ಹಾಗೂ 42 ಗ್ರಾಮದ ಆಡಳಿತಾಧಿಕಾರಿ(VAO)ಗಳು ಉಪಸ್ಥಿತರಿದ್ದರು.
0 ಕಾಮೆಂಟ್‌ಗಳು