ಬಂಟ್ವಾಳ:ಸೆ,22 ದ.ಕನ್ನಡ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಾಸಿಕ ಸಭೆಯು, ಮಾನ್ಯ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಯತೀಶ್ ಎನ್, ಐ.ಪಿ.ಎಸ್ ರವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರ ಕಛೇರಿಯಲ್ಲಿ ನೆರವೇರಿತು.

ಸಭೆಯಲ್ಲಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶ್ರೀ ರಾಜೇಂದ್ರ ಡಿ ಎಸ್, ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಶ್ರೀ ವಿಜಯ ಪ್ರಸಾದ್ ಎಸ್ ಹಾಗೂ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಶ್ರೀ ಅರುಣ್ ನಾಗೇ ಗೌಡ, ಜಾರಿ ನಿರ್ದೇಶನಾಲಯದ ಪೊಲೀಸ್ ನಿರೀಕ್ಷಕರು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರು ಹಾಜರಿದ್ದರು.
0 ಕಾಮೆಂಟ್‌ಗಳು