ಸುಬ್ರಹ್ಮಣ್ಯ ರೋಟರಿ ಕ್ಲಬ್ ನಿಂದ ವ್ಯಕ್ತಿತ್ವ ವಿಕಸನ ತರಬೇತಿ.

ಸುಬ್ರಹ್ಮಣ್ಯ ಅ.12: ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಎಲಿ ಮಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಗುರುವಾರ ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರವನ್ನು ಏರ್ಪಡಿಸಲಾಯಿತು .

Img 20241012 Wa0038

.ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಈ ವರ್ಷದ ವಾರ್ಷಿಕ ವಿಶೇಷ ಶಿಬಿರವನ್ನು ಸರಕಾರಿ ಪ್ರೌಢಶಾಲಾ ಎಲಿಮೆಲೆಯಲ್ಲಿ ಏರ್ಪಡಿಸಲಾಗಿದೆ. ಶಿಬಿರದಂದು ಜೆಸಿಐನ ವಲಯ ತರಬೇತುದಾರರಾದ ಪ್ರದೀಪ್ ಬಾಕಿಲ ಅವರು ಎನ್ಎಸ್ಎಸ್ ವಿದ್ಯಾರ್ಥಿಗಳಿಗೆ ನಾಯಕತ್ವ ಹಾಗೂ ಮಾನವೀಯ ಸಂಬಂಧಗಳ ಬಗ್ಗೆ ವ್ಯಕ್ತಿತ್ವ ವಿಕಸನ ತರಬೇತಿ ನೀಡಿದರು.

ಸಭಾಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನ ಅಧ್ಯಕ್ಷ ಚಂದ್ರಶೇಖರ ನಾಯರ್ ವಹಿಸಿದ್ದರು ವೇದಿಕೆಯಲ್ಲಿ ಎನ್ಎಸ್ಎಸ್ ಅಧಿಕಾರಿ ಹಾಗೂ ಉಪನ್ಯಾ ಸಕರುಗಳಾದ ಪೂರ್ಣಿಮಾ, ಸೌಮ್ಯ, ಶೃತಿ, ರಾಧಾಕೃಷ್ಣ ಚಿದ್ಗಲ್, ಹಾಗೂ ವಿದ್ಯಾರ್ಥಿ ನಾಯಕರುಗಳು ಉಪಸ್ಥಿತರಿದ್ದರು.

0 ಕಾಮೆಂಟ್‌ಗಳು