ಕಡಬ: ಸಾಲ ಬಾಧೆ ಮತ್ತು ಆರೋಗ್ಯ ಸಮಸ್ಯೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಐತ್ತೂರು ಗ್ರಾಮದಿಂದ ಅ.12 ರಂದು ವರದಿಯಾಗಿದೆ.
ಕಡಬ ತಾಲೂಕು ಐತ್ತೂರು ಗ್ರಾಮದ ಕೇನ್ಯ ನಿವಾಸಿ ಉಮೇಶ್ ಗೌಡ( 53ವ) ಆತ್ಮಹತ್ಯೆ ಮಾಡಿಕೊಂಡವರು.

ಕೃಷಿ ಕೆಲಸ ಮಾಡಿಕೊಂಡಿದ್ದ ಇವರು ಮೊದಲಿನಿಂದಲೂ ಎಡಗೈ ಸ್ವಾದೀನ ಕಳೆದುಕೊಂಡ ಕಾರಣ ಬಲ ಗೈ ಯಲ್ಲೇ ಕೆಲಸ ಕಾರ್ಯ ಮಾಡಿಕೊಂಡಿದ್ದರು.ಇತ್ತೀಚೆಗೆ ಬಲಗೈ ಕೂಡ ಸ್ವಾದೀನ ಕಳೆದುಕೊಂಡು ಚಿಕಿತ್ಸೆ ಪಡೆದಿದ್ದರೂ ನೋವು ಕಡಿಮೆಯಾಗಿಲ್ಲ ಎನ್ನಲಾಗಿದೆ.
ಮೃತರ ಮಗಳು ಕಾವ್ಯಶ್ರೀ ಅವರು ನೀಡಿದ ದೂರಿನಂತೆ ಕಡಬ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಲ್ಲಿ ಸಾಲ ಮಾಡಿದ್ದು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಅ.12 ರಂದು ಯಾವುದೋ ವಿಷ ಪದಾರ್ಥ ಸೇವಿಸಿ ಒದ್ದಾಡುತ್ತಿರುವುದನ್ನು ಗಮನಿಸಿ ಆಸ್ಪತ್ರೆಗೆ ದಾಖಲಿಸಿದರೂ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
0 ಕಾಮೆಂಟ್‌ಗಳು