ಗಾಂಧಿ ಜಯಂತಿಯ ಆಚರಣೆಯ ಪ್ರಯುಕ್ತ, ಪಿ.ಎಚ್‌.ಸಿ ಸ್ವಚ್ಛತೆ ಹಾಗೂ ಬೀದಿ ನಾಟಕ ಪ್ರದರ್ಶನ.

ಕುಕ್ಕೆಸುಬ್ರಹ್ಮಣ್ಯ: ನ ,2, ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಗಾಂಧಿ ಜಯಂತಿಯ ಆಚರಣೆಯ ಪ್ರಯುಕ್ತ, ಪಿ.ಎಚ್‌.ಸಿ ಸ್ವಚ್ಛತೆ ಹಾಗೂ ಬೀದಿ ನಾಟಕ ಪ್ರದರ್ಶನ.

Img 20241002 Wa0041

ಕುಕ್ಕೆಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನ ,2 ರಂದು ಗಾಂಧಿ ಜಯಂತಿಯ ಪ್ರಯುಕ್ತ, ಸುಬ್ರಹ್ಮಣ್ಯದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ತದನಂತರ ಸುಬ್ರಹ್ಮಣ್ಯ ರಥ ಬೀದಿಯಲ್ಲಿ ಸ್ವಚ್ಛತೆಗೆ ಸಂಬಂಧಪಟ್ಟಂತೆ ಬೀದಿ ನಾಟಕ ಪ್ರದರ್ಶನವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ದೇವಳದ ಕಾರ್ಯನಿರ್ವಹಣಾಧಿಕಾರಿಗಳು, ಸಹ ಕಾರ್ಯ ನಿರ್ವಹಣಾಧಿಕಾರಿಗಳು, ದೇವಳದ ಸಿಬ್ಬಂದಿ, ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ದಿನೇಶ ಪಿ.ಟಿ, ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕಿ ಲತಾ ಬಿ. ಟಿ, ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಗಳಾದ ಆರತಿ ಕೆ ಹಾಗೂ ಸುಮಿತ್ರಾ ಕುಮಾರಿ ಎರಡು ಘಟಕಗಳ ನಾಯಕರುಗಳು, ಸ್ವಯಂಸೇವಕರುಗಳು ಪಾಲ್ಗೊಂಡರು.

0 ಕಾಮೆಂಟ್‌ಗಳು