ಕಡಬ :ರಸ್ತೆ ದಾಟುವಾಗ ವಿಧ್ಯಾರ್ಥಿನಿಗೆ ಡಿಕ್ಕಿ ಹೊಡೆದ ಕಾರು..!

ಕಡಬ : ರಸ್ತೆ ದಾಟುವಾಗ ಕಾರು ಡಿಕ್ಕಿ ಹೊಡೆದ ಹಿನ್ನಲೆ ಕಾಲೇಜು ವಿದ್ಯಾರ್ಥಿ ಗಾಯಗೊಂಡ ಘಟನೆ ಕಡಬ ಸಮೀಪದ ಹೊಸಮಠದಲ್ಲಿ ನಡೆದಿದೆ.
ದೇರಾಜೆ ದೀಕ್ಷಾ ಎಂಬ ವಿಧ್ಯಾರ್ಥಿನಿ ಬಸ್ ಹತ್ತಲು ರಸ್ತೆ ದಾಟುತ್ತಿರುವಾಗ ರಭಸವಾಗಿ ಬಂದು ಕಾರು ಡಿಕ್ಕಿ ಹೊಡೆದಿದ್ದು ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸದ್ಯ ಗಂಭೀರ ಗಾಯಗೊಂಡ ವಿದ್ಯಾರ್ಥಿನಿಗೆ ಚಿಕಿತ್ಸೆ ಕೊಡಿಸಲು ಪುತ್ತೂರಿಗೆ ಕೊಂಡೊಯ್ಯಲಾಗಿದೆ.ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

0 ಕಾಮೆಂಟ್‌ಗಳು