ಮೃತ ಯುವಕನನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಉದೇರಿ ನಿವಾಸಿ ದಿ. ಶ್ರೀಧರ ಗೌಡ ಎಂಬವರ ಪುತ್ರ ಬಿಶ್ವಜಿತ್(23) ಎಂದು ಗುರುತಿಸಲಾಗಿದೆ. ಕಡಬದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ವಿಶ್ವಜಿತ್ ಚಲಾಯಿಸುತ್ತಿದ್ದ ಬೈಕ್ ನಡುವೆ ಹಳೇಸ್ಟೇಷನ್ ಸಮೀಪದ ಕೃಷ್ಣನಗರ ಎಂಬಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಯುವಕನನ್ನು ಕಡಬ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಕಡಬ: ಬೈಕ್ ಮತ್ತು ಬಸ್ ಡಿಕ್ಕಿ ಸವಾರ ಮೃತ್ಯು...!

ಕಡಬ, ಮೇ.26. ಬೈಕ್ ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ರಾತ್ರಿ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಹಳೇಸ್ಟೇಷನ್ ಎಂಬಲ್ಲಿ ನಡೆದಿದೆ.
0 ಕಾಮೆಂಟ್‌ಗಳು