ನಡುರಸ್ತೆಯಲ್ಲಿ ಬಿಜೆಪಿ ಮುಖಂಡನ ಕಾಮದಾಟ ; ವಿಡಿಯೋ ವೈರಲ್...!

ನ್ಯೂಸ್ ಡೆಸ್ಕ್:  ಮಧ್ಯಪ್ರದೇಶದ ಮಂಡೌರ್ ಜಿಲ್ಲೆಯ ಬಿಜೆಪಿ ನಾಯಕ ಮನೋಹರ್ ಲಾಲ್ ಧಾಕಡ್ ಮಹಿಳೆಯೊಂದಿಗೆ ನಡು ರಸ್ತೆಯಲ್ಲಿ ಕಾಮದಾಟವಾಡಿದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋ ನೋಡಿದ ಜನ ಮನೋಹರ್ ಲಾಲ್ ಛೀ.. ಥೂ ಎಂದು ಉಗಿದಿದ್ದಾರೆ.



ಕಳೆದ ಎರಡ್ಮೂರು ದಿನಗಳಿಂದ ಈತನ ರಾಸಲೀಲೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು,ಸದ್ಯ ಆತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.


ಮೇ 13 ರಂದು ಘಟನೆ ನಡೆದಿದೆ ಎನ್ನಲಾಗಿದ್ದು, ಸಿಸಿಟಿವಿ ದೃಶ್ಯಗಳು ಈಗ ವೈರಲ್ ಆಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಮನೋಹರ್ ಲಾಲ್ ಓರ್ವ ಯುವತಿಯೊಂದಿಗೆ ತಾವೇ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿದ್ದರು. ಇದ್ದಕ್ಕಿದ್ದಂತೆ ರಸ್ತೆ ಬದಿಗೆ ಕಾರು ನಿಲ್ಲಿಸಿ ಅರೆನಗ್ನ ಯುವತಿಯೊಂದಿಗೆ ಕಾರಿನಿಂದ ಇಳಿಯುತ್ತಾರೆ.ಬಳಿಕ ಯುವತಿಯೊಂದಿಗೆ ಕೆಲವು ಹೊತ್ತು ಆಕ್ಷೇಪಾರ್ಹ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಈ ವಿಡಿಯೋಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ದೆಹಲಿ-ಮುಂಬೈ ಎಕ್ಸ್ ಪ್ರೆಸ್ ವೇನಲ್ಲಿ ಈ ಘಟನೆ ನಡೆದಿದೆ.

ವೈರಲ್ ಅದ ವಿಡಿಯೋ👇🏼👇

ಘಟನೆ ಬೆಳಕಿಗೆ ಬರುತ್ತಿದ್ದಂತೇ ಬಿಜೆಪಿ ಪಕ್ಷದಿಂದ ಅವರನ್ನು ಅಮಾನತು ಮಾಡಲಾಗಿದೆ ಎನ್ನಲಾಗಿದೆ. ಈ ಘಟನೆಯಿಂದ ಪಕ್ಷ ದೂರವೇ ಉಳಿದಿದೆ. 


0 ಕಾಮೆಂಟ್‌ಗಳು