ಬಂಟ್ವಾಳ : ಮೂರು ದಿನಗಳ ಹಿಂದೆ ಬಂಟ್ವಾಳದಲ್ಲಿ ನಡೆದ ಪಿಕಪ್ ಚಾಲಕ ಅಬ್ದುಲ್ ರಹೀಂ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಹೀಂ ಕೊಲೆಯ ಪ್ರಮುಖ ಆರೋಪಿ ಸುಮಿತ್ ಮತ್ತು ರವಿರಾಜ್ ರನ್ನು ಪೊಲೀಸರು ಬಂಧಿಸಿದ್ದು ಇವರ ಬಂಧನದೊಂದಿಗೆ ಪ್ರಕರಣದಲ್ಲಿ ಈವರೆಗೆ ಬಂಧಿತರಾದ ಆರೋಪಿಗಳ ಒಟ್ಟು ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.ಈ ಮೊದಲು, ಪ್ರಕರಣದ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಂಟ್ವಾಳ ಮೂಲದ ದೀಪಕ್ (21), ಪೃಥ್ವಿರಾಜ್ (21), ಮತ್ತು ಚಿಂತನ್ (19) ಎಂಬುವವರೇ ಈ ಹಿಂದೆ ಬಂಧಿತರಾಗಿದ್ದ ಆರೋಪಿಗಳು.
ಮರಳು ವ್ಯಾಪಾರ ಮಾಡುತ್ತಿದ್ದ ಅಬ್ದುಲ್ ರಹೀಂರವರನ್ನು ಗ್ರಾಹಕರ ಸೋಗಿನಲ್ಲಿ ಮೇ 27ರಂದು ನಿರ್ಜನ ಪ್ರದೇಶಕ್ಕೆ ಕರೆಸಿ, ಮರಳು ಅನ್ ಲೋಡ್ ಮಾಡುತ್ತಿದ್ದಾಗ ಕೊಲೆ ಮಾಡಲಾಗಿತ್ತು. ಎರಡು ಡಿಯೋ ವಾಹನದಲ್ಲಿ ಬಂದ 6 ಜನ ಹಂತಕರು ಕೊಚ್ಚಿ ಕೊಲೆಗೈದಿದ್ದರು. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ ಕ್ರ 54/2025, ಭಾರತೀಯ ನ್ಯಾಯ ಸಂಹಿತೆ 2023ರ ಕಲಂ 191[1], 191[2], 191[3], 118[1], 118[2], 109, 103 ಮತ್ತು 190 ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
0 ಕಾಮೆಂಟ್‌ಗಳು