ಕೀರ್ತಿ ಎಂಬವರು ಅವರ ಗ್ರಾಮಕ್ಕೆ ಸಂಬಂಧಿಸಿದ ದೈವಸ್ಥಾನದ ಉಸ್ತುವಾರಿಯನ್ನು ನೋಡಿ ಕೊಳ್ಳುತ್ತಿದ್ದು,ದಿನಾಂಕ: 10.06.2025 ರಂದು ರಾತ್ರಿ ದೈವಸ್ಥಾನದ ಬಳಿ ಹೋದಾಗ ಅಲ್ಲಿ ಓರ್ವ ವ್ಯಕ್ತಿಯು ದೈವಸ್ಥಾನದ ಬಾಗಿಲು ಬೀಗವನ್ನು ಒಡೆಯಲು ಪ್ರಯತ್ನಿಸುತ್ತಿದ್ದನ್ನು ನೋಡಿದ್ದು ಕೊಡಲೇ ಪರಿಚಿತರೊಬ್ಬರಿಗೆ ಕರೆ ಮಾಡಿ ದೈವಸ್ಥಾನದ ಬಳಿ ಬರುವಂತೆ ತಿಳಿಸಿರುತ್ತಾರೆ.ಅವರು ಬಂದ ನಂತರ ಬಾಗಿಲು ಒಡೆಯಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಹಿಡಿದು ವಿಚಾರಿಸಿದಾಗ ತನ್ನ ಹೆಸರು ಹನುಮಂತರಾಯ ಯಾನೆ ಗೌಡನಗೌಡ ಎಂಬುದಾಗಿ ಹೇಳಿದ್ದಾನೆ.
ದೈವಸ್ಥಾನದಲ್ಲಿ ಬೆಲೆಬಾಳುವ ವಸ್ತುಗಳಿರಬಹುದೆಂದು ಬಾಗಿಲನ್ನು ಒಡೆಯಲು ಪ್ರಯತ್ನಿಸಿರುವುದಾಗಿ ಒಪ್ಪಿಕೊಂಡಿದ್ದು ಕೂಡಲೇ ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿ ದೂರು ನೀಡಿದ್ದಾರೆ.
0 ಕಾಮೆಂಟ್‌ಗಳು