ಗುಂಡ್ಯ:ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ;ಹಲವರಿಗೆ ಗಾಯ

ಕಡಬ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ನಸುಕಿನ ವೇಳೆ ಖಾಸಗಿ ಬಸ್ ಪಲ್ಟಿಯಾಗಿ ಹಲವಾರು ಪ್ರಯಾಣಿಕರು ಗಾಯಗೊಂಡ ಘಟನೆ ಜೂನ್ 7 ರಂದು ನಡೆದಿದೆ.
ಬೆಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ Mercy ಹೆಸರಿನ ಖಾಸಗಿ ಬಸ್ ಸುಮಾರು 3:30 ರ ವೇಳೆ ಗುಂಡ್ಯ ಸಮೀಪ ತಲುಪುತ್ತಿದ್ದಂತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ಪಲ್ಟಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಘಟನೆಯಲ್ಲಿ ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು ಚಾಲಕ ಸೇರಿದಂತೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಗಾಯಗೊಂಡ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ.ವೇಗದ ಚಾಲನೆಯೇ ಬಸ್ ಪಲ್ಟಿಯಾಗಲು ಕಾರಣ ಎನ್ನಲಾಗುತ್ತಿದೆ. ಬಸ್ಸಿನಲ್ಲಿದ್ದ ಬಹುತೇಕ ಪ್ರಯಾಣಿಕರು ನಿದ್ರೆ ಮಂಪರಿನಲ್ಲಿದ್ದರು ಎನ್ನಲಾಗಿದೆ.ಹಬ್ಬದ ನಿಮಿತ್ತ ಕೆಲವರು ಊರಿಗೆ ಬರುತ್ತಿದ್ದವರು ಈ ಬಸ್ಸಿನಲ್ಲಿದ್ದರು ಎಂಬ ಮಾಹಿತಿ ಲಭಿಸಿದೆ.ಹೆಚ್ಚಿನ ವಿವರ ಲಭಿಸಿಲ್ಲ.

0 ಕಾಮೆಂಟ್‌ಗಳು